ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ
ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿರುವ ಮದರಸಾಗಳಲ್ಲಿ 3 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಹೆಚ್ಚುವರಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ಮದ್ರಸಾ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯು ನಡೆಸುವ ಎರಡನೇ ಹಂತದ ಸ್ಮಾರ್ಟ್ ಸ್ಕಾಲರ್‌ಶಿಪ್ ಪರೀಕ್ಷೆಯ ಮುಖ್ಯ ಪರೀಕ್ಷೆಯು ನ.29 ರ ಶನಿವಾರ ಭಾರತೀಯ ಕಾಲಮಾನ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ, ಸೌದಿ ಅರೇಬಿಯಾ, ಬಹ್ರೇನ್, ಕತಾರ್, ಯುಎಇ, ಓಮನ್ ಮತ್ತು ಕುವೈತ್‌ನಲ್ಲಿ 3200 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಒಂದು ಲಕ್ಷದ ಎರಡು ಸಾವಿರದ ಐನೂರು ಆಯ್ದ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಿದರು. ಪರೀಕ್ಷೆಯು ಸಂಪೂರ್ಣವಾಗಿ OMR ತಂತ್ರಜ್ಞಾನವನ್ನು ಬಳಸಿಕೊಂಡು ನಾಗರಿಕ ಸೇವೆಗಳ ಪರೀಕ್ಷೆಯ ಮಾದರಿಯಲ್ಲಿ ರಚನೆಯಾಗಿದೆ. ಒಬ್ಬ ಮುಖ್ಯ ಪರೀಕ್ಷಕರು ಮತ್ತು 30 ವಿದ್ಯಾರ್ಥಿಗಳಿಗೆ ಒಬ್ಬ ಪರಿವೀಕ್ಷಕರು ಸಹಿತ ವಿಶೇಷ ತರಬೇತಿ ಪಡೆದ 6500 ಶಿಕ್ಷಕರು ಮುಖ್ಯ ಪರೀಕ್ಷೆಯನ್ನು ನಡೆಸಿದರು. ಎಸ್ ಜೆ ಎಂ ರಾಜ್ಯ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ ಎಂ ಮದನಿ ಸಹಿತವಿರುವ 200 ಕ್ಕೂ ಮಿಕ್ಕ ಸೂ...