ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಚಿನ್ನ ಪಡೆದ ವಿದ್ಯಾರ್ಥಿನಿಗೆ ಎಸ್ ಜೆ ಎಂ ಉಳ್ಳಾಲ ರೇಂಜ್ ವತಿಯಿಂದ ಅಭಿನಂದನೆ


ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನ ಪಡೆದ ಅಳೇಕಲದ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದ +2 ತರಗತಿಯ ವಿದ್ಯಾರ್ಥಿನಿ ಫಾತಿಮ ಮುನೀಬಃಳಿಗೆ ಎಸ್ ಜೆ ಎಂ ಉಳ್ಳಾಲ ರೇಂಜ್ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಚಿತ್ರದಲ್ಲಿ ಮುನೀಬಃಳ ತಂದೆ ಅಬ್ಬಾಸ್ ಮದನಿ ಅಳೇಕಲ, ಮುನೀಬಃಳ ಉಸ್ತಾದ್ ಹನೀಫ್ ಸಅದಿ ಅಳೇಕಲ, ಉಳ್ಳಾಲ ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಉಳ್ಳಾಲ, ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನಲ್ ಟ್ರಸ್ಟ್ ಮುಫತ್ತಿಶರಾದ ಹುಸೈನ್ ಸಅದಿ ಹೊಸ್ಮಾರ್, ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಸದರ್ ಮುಅಲ್ಲಿಮರಾದ ಸೆರ್ಕಳ ಇಬ್ರಾಹಿಂ ಸಖಾಫಿ, ರೇಂಜ್ ಪರೀಕ್ಷಾ ವಿಭಾಗದ ಉಪಾಧ್ಯಕ್ಷರಾದ ಕೆ ಎಂ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ, ಮುಕ್ಕಚೇರಿ ಜುಮಾ ಮಸ್ಜಿದ್ ಖತೀಬರಾದ ಶರೀಫ್ ಬಾಖವಿ ಯವರನ್ನು ಕಾಣಬಹುದು.

Comments

Popular posts from this blog

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ( ಎಸ್ ಜೆ ಎಂ ) ದ.ಕ ಜಿಲ್ಲಾ ವೆಸ್ಟ್ ಮಹಾಸಭೆ. ನೂತನ ಪದಾಧಿಕಾರಿಗಳ ಆಯ್ಕೆ

ಸಮಸ್ತ ಸೆಂಟಿನರಿ ಸಂಭ್ರಮದ ಅಂಗವಾಗಿ ನಡೆದ ದ.ಕ.ಜಿಲ್ಲಾ ಮುಅಲ್ಲಿಂ ಸಮ್ಮೇಳನ

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ